ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಮಲ್ನಾಡ್ ಕೌಂಟಿ ಬಡಾವಣೆಯಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಮಲ್ನಾಡ್ ಕೌಂಟಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡಾ. ಬಾಲಕೃಷ್ಣ ಹೆಗಡೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ತಮ್ಮ ಪ್ರಾಣ ತ್ಯಾಗ ಮಾಡಿದ್ದು, ಅವರ ಹೋರಾಟ ಮತ್ತು ತ್ಯಾಗದ ಫಲವಾಗಿ ಇಂದು ನಾವು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ ಎಂದು ಹೇಳಿದರು.
ಪೂರ್ವಜರು ಹೋರಾಟದ ಮೂಲಕ ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಪ್ರತಿಯೊಬ್ಬರೂ ಗೌರವಿಸಿ, ಸಂರಕ್ಷಿಸುವ ಜವಾಬ್ದಾರಿ ಹೊಂದಿದ್ದಾರೆ. ದೇಶದ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎನ್.ಜಿ.ಡಿ. ಶಿವಕುಮಾರ ಮೈಲಾರ, ಬಸವರಾಜ್, ದೇವೇಂದ್ರ, ವಿನಯ್, ಗಣೇಶ್, ಪಾರ್ವತಿ ಮಂಜುನಾಥ ಹೆಗಡೆ, ಚೈತ್ರಾ, ಗಣೇಶ್ ಆರ್. ಸೇರಿದಂತೆ ಹಲವು ನಿವಾಸಿಗಳು ಉಪಸ್ಥಿತರಿದ್ದರು.
More Stories
ಶಿವಮೊಗ್ಗ ವಿದ್ಯುತ್ ವ್ಯತ್ಯಯ: ಅ.15ರಂದು ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ವಿಶ್ವ ಕೌಶಲ್ಯ ಸ್ಪರ್ಧೆ 2026: ಶಿವಮೊಗ್ಗದಲ್ಲಿ ಅರ್ಜಿ ಆಹ್ವಾನ
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ವಶಕ್ಕೆ