ಹೊಸನಗರ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೊಸನಗರ ತಾಲೂಕಿನ ವಿವಿಧ ಮಸೀದಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.
ಮಸೀದಿ ಆವರಣಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ದೇಶಪ್ರೇಮವನ್ನು ಸಾರಲಾಯಿತು. ಮಸೀದಿ ಆಡಳಿತ ಮಂಡಳಿ ಸದಸ್ಯರು, ಧಾರ್ಮಿಕ ಮುಖಂಡರು, ಸ್ಥಳೀಯರು ಹಾಗೂ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದ ಮುಖಂಡರು, ದೇಶದ ಏಕತೆ, ಅಖಂಡತೆ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಸಂದೇಶ ನೀಡಿದರು. ಮಕ್ಕಳು ಹಾಗೂ ಯುವಕರು ಉತ್ಸಾಹದಿಂದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸ್ವಾತಂತ್ರ್ಯೋತ್ಸವಕ್ಕೆ ಮೆರುಗು ತಂದರು.

ರಿಪ್ಪನ್ ಪೇಟೆ
ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷ ಹಸನಬ್ಬ ಬಾವ ಬ್ಯಾರಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಧರ್ಮಗುರು ಮುನೀರ್ ಸಖಾಫಿ, ಮುಖಂಡರಾದ ಆರ್.ಎ. ಚಾಬುಸಾಬ್, ಆಸೀಫ್ ಭಾಷಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಿಟ್ಟೂರು
ನಿಟ್ಟೂರು ಜುಮ್ಮಾ ಮಸೀದಿಯಲ್ಲಿ ಧರ್ಮಗುರು ಉಬೇದುಲ್ಲಾ ಸಖಾಫಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು ಸೇರಿದಂತೆ ಅನೇಕ ಮಹಾನ್ ನಾಯಕರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಸಹೋದರತೆ, ಭ್ರಾತೃತ್ವ, ದೇಶದ ಐಕ್ಯತೆ ಹಾಗೂ ಸೌಹಾರ್ದತೆಯನ್ನು ಕಾಪಾಡಿಕೊಂಡು ಬದುಕಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜನಾಬ್ ಎಚ್. ಅಬ್ದುಲ್ಲ, ಮೊಹಮ್ಮದ್ ಖಾನ್, ಹುಸೇನ್ ಸಾಬ್, ಜಯರಾಮ ಶೆಟ್ಟಿ, ಮಂಜುನಾಥ ಶೆಟ್ಟಿ, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಖಾದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹೊಸನಗರ
ಹೊಸನಗರ ಪಟ್ಟಣದ ಬದ್ರಿಯಾ ಹಾಗೂ ಜಾಮೀಯ ಜುಮ್ಮಾ ಮಸೀದಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷ ಇಸಾಕ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮಗುರುಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಜಯನಗರ
ಹೊಸನಗರ ತಾಲೂಕಿನ ಜಯನಗರದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಆವರಣದಲ್ಲಿ ಮಸೀದಿಯ ಧರ್ಮಗುರುಗಳು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರು.

ಬಟ್ಟೆಮಲ್ಲಪ್ಪ
ಬಟ್ಟೆಮಲ್ಲಪ್ಪ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಸೀದಿ ಸಮಿತಿ ಅಧ್ಯಕ್ಷ ಸಾದಿಕ್ ಕಚ್ಚಿಗೆಬೈಲ್ ಅವರು ಧ್ವಜಾರೋಹಣ ನೆರವೇರಿಸಿದರು.

ನಗರ
ಹೊಸನಗರ ತಾಲೂಕಿನ ನಗರದ ಸುಲ್ತಾನ್ ಜುಮ್ಮಾ ಮಸೀದಿ ಆವರಣದಲ್ಲಿ ಮಸೀದಿಯ ಧರ್ಮಗುರು ಅಶ್ರಫ್ ಇಮಾಮಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.



More Stories
ಶಿವಮೊಗ್ಗದ ಪ್ರತ್ಯಂಗಿರಾ ದೇವಿ ಆಶ್ರಮದ ಬಳಿ ಕುಟುಂಬ ಕಲಹ: ಆಸ್ತಿ ಪಾಲಿಗಾಗಿ ಪ್ರತಿಭಟನೆ
ಅಂಗನವಾಡಿ ಕಾರ್ಯಕರ್ತೆ–ಸಹಾಯಕಿಯರ ಹುದ್ದೆ: ಅರ್ಜಿ ಸಲ್ಲಿಕೆ ಅವಧಿ ಸೆ. 5ರವರೆಗೆ ವಿಸ್ತರಣೆ
ಶಿವಮೊಗ್ಗದಲ್ಲಿ ಹಿರಿಯ ನಾಗರಿಕರೊಂದಿಗೆ ಆತ್ಮೀಯ ಸಂವಾದ: ಇನ್ನರ್ ವೀಲ್ ಕ್ಲಬ್ನ ವಿನೂತನ ಕಾರ್ಯಕ್ರಮ