ಶಿವಮೊಗ್ಗ, ಆಗಸ್ಟ್ 29: ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಹಾಗೂ ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗ ಸೆಪ್ಟೆಂಬರ್ 5, 2026ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಈ ಹಿಂದೆ ಆಗಸ್ಟ್ 29ರವರೆಗೆ ನಿಗದಿಪಡಿಸಲಾಗಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 5ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ವಿಸ್ತರಿಸಲಾದ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



More Stories
ಶಿವಮೊಗ್ಗ ವಿದ್ಯುತ್ ವ್ಯತ್ಯಯ: ಅ.15ರಂದು ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ವಿಶ್ವ ಕೌಶಲ್ಯ ಸ್ಪರ್ಧೆ 2026: ಶಿವಮೊಗ್ಗದಲ್ಲಿ ಅರ್ಜಿ ಆಹ್ವಾನ
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ವಶಕ್ಕೆ