AI-Vartha.in

ನಿಖರ ಸುದ್ದಿ, ನೇರ ವರದಿ

ಆಗಸ್ಟ್ 30ರಂದು ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಆ. 28 : ಶಿವಮೊಗ್ಗ ನಗರದ ವಿದ್ಯುತ್ ವಿತರಣಾ ಕೇಂದ್ರ ಹಾಗೂ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮತ್ತು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್.-11 ಫೀಡರ್‌ನಲ್ಲಿ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಆಗಸ್ಟ್ 30ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕೆಂಚಪ್ಪ ಲೇಔಟ್, ಸೂಡಾ ಕಾಂಪ್ಲೆಕ್ಸ್, ದಯಾನಂದ ಪ್ರಿಂಟರ್ಸ್ ಸಮೀಪ, ಪೊಲೀಸ್ ಚೌಕಿ, ಆರಾಧ್ಯ ಕಣ್ಣಿನ ಆಸ್ಪತ್ರೆ, ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ಸುತ್ತಮುತ್ತ, ಸವಿ ಬೇಕರಿ ಎದುರಿನ 100 ಅಡಿ ರಸ್ತೆ, ಕರಿಯಣ್ಣ ಬಿಲ್ಡಿಂಗ್‌ನಿಂದ ಪೊಲೀಸ್ ಚೌಕಿವರೆಗೆ, ಹುಚ್ಚರಾಯ ಕಾಲೋನಿ ಹಾಗೂ ದೇವರಾಜ ಅರಸು ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಬಾಲರಾಜು ಅರಸು ರಸ್ತೆ (ಮಹಾವೀರ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ), ಪಾರ್ಕ್ ಬಡಾವಣೆ, ನೆಹರೂ ರಸ್ತೆ, ಜಯನಗರ ಪೊಲೀಸ್ ಠಾಣೆ ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಎಂಜಿ ಪ್ಯಾಲೇಸ್, ಮಥುರಾ ಹೋಟೆಲ್ ರಸ್ತೆ ಹಾಗೂ ಬಿಎಸ್‌ಎನ್‌ಎಲ್ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.