ಬೆಂಗಳೂರು, 07 ಸೆಪ್ಟೆಂಬರ್: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು (MoEFCC) ‘ಸ್ವಚ್ಛ ವಾಯು ದಿವಸ 2026’ ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಮೌಲ್ಯಮಾಪನದಲ್ಲಿ ದಾವಣಗೆರೆ ನಗರವು ರಾಜ್ಯಮಟ್ಟದ ಎರಡು ಪ್ರಮುಖ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಸಾಧನೆಗಾಗಿ ನಗರಕ್ಕೆ ಒಟ್ಟು 25 ಲಕ್ಷ ರೂಪಾಯಿಗಳ ನಗದು ಬಹುಮಾನ ಲಭಿಸಿದೆ.
ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮದ (NCAP) ನಾನ್-ಅಟೈನ್‌ಮೆಂಟ್ ನಗರವಾಗಿರುವ ದಾವಣಗೆರೆಯು, ಜನಸಂಖ್ಯೆ ಆಧಾರಿತ ವರ್ಗೀಕರಣದಡಿ ಅತ್ಯುತ್ತಮ ಸಾಧನೆ ತೋರಿದೆ. ನಗರದ ಎಸ್‌ಎಸ್ ಬಡಾವಣೆ – ಬಿ ಬ್ಲಾಕ್ (ಜನಸಂಖ್ಯೆ ವರ್ಗ 2) ಹಾಗೂ ಡಿಸಿಎಂ ಟೌನ್‌ಶಿಪ್ (ಜನಸಂಖ್ಯೆ ವರ್ಗ 3) ಈ ವಿಭಾಗಗಳಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿವೆ.
ವಾಯು ಮಾಲಿನ್ಯ ನಿಯಂತ್ರಣ, ಪರಿಸರ ಜಾಗೃತಿ ಹಾಗೂ ನೈರ್ಮಲ್ಯ ನಿರ್ವಹಣೆಯಲ್ಲಿ ಸ್ಥಳೀಯ ನಿವಾಸಿಗಳು ಮತ್ತು ಮಹಾನಗರ ಪಾಲಿಕೆಯ ಸತತ ಪ್ರಯತ್ನಕ್ಕೆ ಈ ಪ್ರಶಸ್ತಿ ಸಾಕ್ಷಿಯಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು, ಸ್ಥಳೀಯ ಪ್ರತಿನಿಧಿಗಳು ಹಾಗೂ ದಾವಣಗೆರೆಯ ನಾಗರಿಕರು ತೋರಿದ ಸಹಕಾರ ಮತ್ತು ಶ್ರಮಕ್ಕೆ ಕೃತಜ್ಞತೆ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ನಗರದ ಗಾಳಿಯ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು ಬದ್ಧರಾಗಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Davanagere city secured two major state-level awards under the “Swachh Ward Vayu Survekshan 2025” announced by MoEFCC on the occasion of Swachh Vayu Divas 2026. SS Layout B Block and DCM Township bagged top honors in their respective population categories, fetching a total cash prize of Rs 25 lakh for the city.



More Stories
ಡಾ. ಹಸೀನಾ ಎಚ್.ಕೆ. ಅವರಿಗೆ ‘ರಾಷ್ಟ್ರೀಯ ಗಝಲ್ ರತ್ನ’ ಪ್ರಶಸ್ತಿ
Nepal Flood: ಕಾಣೆಯಾದ ಕನ್ನಡಿಗರ DNA ಸಂಗ್ರಹಕ್ಕೆ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರ
Bharat Jodo Logo Unveiled: ‘ಭಾರತ್ ಜೋಡೋ’ ನೂತನ ಲೋಗೋ ಅನಾವರಣಗೊಳಿಸಿದ ಡಾ. ಜಿ. ಪರಮೇಶ್ವರ್