ಬೆಂಗಳೂರು: ಚಂದನವನದ ಖ್ಯಾತ ನಟ ದುನಿಯಾ ವಿಜಯ್ (ಬಿ.ಆರ್. ವಿಜಯ್ ಕುಮಾರ್) ಹಾಗೂ ಅವರ ಮೊದಲ ಪತ್ನಿ ನಾಗರತ್ನ ಅವರ ನಡುವಿನ ದಾಂಪತ್ಯ ಜೀವನಕ್ಕೆ ಹೈಕೋರ್ಟ್ ಅಧಿಕೃತವಾಗಿ ತೆರೆ ಎಳೆದಿದೆ.
ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದುನಿಯಾ ವಿಜಯ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್. ಶಾಂತಿಭೂಷಣ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ಪ್ರಕಟಿಸಿದೆ. ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ ನ್ಯಾಯಪೀಠ, ವಿಚ್ಛೇದನಕ್ಕೆ ಅನುಮತಿ ನೀಡಿದೆ. ಜೊತೆಗೆ ವಿಜಯ್ ಅವರು ಪತ್ನಿ ನಾಗರತ್ನ ಅವರಿಗೆ ಮೂರು ತಿಂಗಳ ಒಳಗಾಗಿ 2 ಕೋಟಿ ರೂಪಾಯಿ ಜೀವನಾಂಶ ಪಾವತಿಸಬೇಕು ಎಂದು ಆದೇಶಿಸಿದೆ.
ನ್ಯಾಯಾಲಯದ ಈ ತೀರ್ಪಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನಟ ದುನಿಯಾ ವಿಜಯ್, “ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ ಆದೇಶ ನೀಡಿರುವ ಮಾನ್ಯ ಉಚ್ಚ ನ್ಯಾಯಾಲಯ ಹಾಗೂ ವಕೀಲರಿಗೆ ಧನ್ಯವಾದಗಳು,” ಎಂದು ಬರೆದುಕೊಂಡಿದ್ದಾರೆ.
ಮುಂದುವರಿದು, “ಈ ವಿಚಾರವಾಗಿ ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಮಾತನಾಡಲು ಇಚ್ಛಿಸುವುದಿಲ್ಲ. ನನ್ನ ಹೆಣ್ಣುಮಕ್ಕಳು ವಯಸ್ಕರಾಗಿದ್ದು, ಅವರಿಗೆ ಯಾವುದೇ ಮುಜುಗರವಾಗಬಾರದು. ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ ನ್ಯಾಯಾಲಯದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದು, ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ,” ಎಂದು ವಿಜಯ್ ತಿಳಿಸಿದ್ದಾರೆ.
The Karnataka High Court has granted a divorce to Sandalwood actor Duniya Vijay and his first wife Nagaratna, setting aside the family court’s previous order. The division bench directed Vijay to pay ₹2 crore as permanent alimony within three months. Responding to the verdict, the actor stated he respects the court’s decision and is stepping towards a new journey in life.



More Stories
ಏಥರ್ ‘ಕೋನಾರ್ಕ್’ ಇವಿ ಸ್ಕೂಟರ್ ಬಿಡುಗಡೆ: ಬೆಲೆ ₹99,999
CBSE ಕ್ಲಸ್ಟರ್ ಅಥ್ಲೆಟಿಕ್ಸ್: ಶಿವಮೊಗ್ಗ ಪೋದಾರ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ, ರಾಷ್ಟ್ರಮಟ್ಟಕ್ಕೆ ಆಯ್ಕೆ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಆನ್ಲೈನ್ ಅರ್ಜಿ ಆಹ್ವಾನ