AI-Vartha.in

ನಿಖರ ಸುದ್ದಿ, ನೇರ ವರದಿ

HAL ನಲ್ಲಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 27: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್), ಬೆಂಗಳೂರಿನಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ತೇರ್ಗಡೆ ಹೊಂದಿರುವ ಅರ್ಹ ಅಭ್ಯರ್ಥಿಗಳು ವಿವಿಧ ತಾಂತ್ರಿಕ ವಿಭಾಗಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ, ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆ್ಯಂಡ್ ಡೈ ಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್ ಹಾಗೂ ಮೆಕಾನಿಕ್ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ವಿಭಾಗಗಳಲ್ಲಿ ತರಬೇತಿ ಅವಕಾಶವಿದೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು

ಆಸಕ್ತ ಅಭ್ಯರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಅಂಕಪಟ್ಟಿ, ಜಾತಿ/ಪಿಡಬ್ಲ್ಯೂಡಿ ಪ್ರಮಾಣಪತ್ರ, ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳ ಮೂಲ ಪ್ರತಿ ಹಾಗೂ ತಲಾ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳು ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/08/2025

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

ಅಪ್ರೆಂಟಿಸ್ ತರಬೇತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗವನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೂರವಾಣಿ: 08182-255293, 9380663606, 9901914601