ಶಿವಮೊಗ್ಗ, 07 ಸೆಪ್ಟೆಂಬರ್: ಕುವೆಂಪು ವಿಶ್ವವಿದ್ಯಾಲಯದ ಮುಖ್ಯ ಆವರಣವಾದ ಶಂಕರಘಟ್ಟದಲ್ಲಿರುವ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕ ಹಾಗೂ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು 1 ಮಹಿಳಾ ವೈದ್ಯರ (Lady Medical Officer) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅಗತ್ಯ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 19-09-2026 ರ ಸಂಜೆಯೊಳಗಾಗಿ ವಿಶ್ವವಿದ್ಯಾಲಯದ ಆಡಳಿತ ವಿಭಾಗಕ್ಕೆ ತಲುಪುವಂತೆ ಸಲ್ಲಿಸಬೇಕಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಕುಲಸಚಿವರು,
ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ,
ಶಂಕರಘಟ್ಟ – 577451, ಶಿವಮೊಗ್ಗ ಜಿಲ್ಲೆ.
ಅರ್ಜಿ ನಮೂನೆ, ಶೈಕ್ಷಣಿಕ ಅರ್ಹತೆಗಳು, ವಯೋಮಿತಿ ಹಾಗೂ ವೇತನಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ www.kuvempu.ac.in ಗೆ ಭೇಟಿ ನೀಡಿ ಪರಿಶೀಲಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kuvempu University, Shankaraghatta, Shivamogga, has invited applications from eligible candidates for 1 post of Female Doctor (Lady Medical Officer) on a temporary/contract basis at its health centre. Interested candidates must submit their filled applications to the Registrar’s office by September 19, 2026. Further details are available on www.kuvempu.ac.in.



More Stories
ಶಿವಮೊಗ್ಗದಲ್ಲಿ ಸೆಪ್ಟೆಂಬರ್ 10 ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಉಚಿತ ಅವಕಾಶ!
ಶಿವಮೊಗ್ಗ ಜಿಲ್ಲಾ ಪಂಚಾಯತ್: ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ ಅಧಿಸೂಚನೆ ತಾತ್ಕಾಲಿಕ ತಡೆ
ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ನಿರೂಪಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಇಲ್ಲಿದೆ ವಿವರ