AI-Vartha.in

ನಿಖರ ಸುದ್ದಿ, ನೇರ ವರದಿ

ಕೆಪಿಸಿಸಿ ಕಾರ್ಮಿಕ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಶಾಂತವೀರ ನಾಯಕ್ ನೇಮಕ!

ಬೆಂಗಳೂರು/ಶಿವಮೊಗ್ಗ, Ai-ವಾರ್ತ, ಸೆಪ್ಟೆಂಬರ್ 17: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಕಾರ್ಮಿಕ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತವೀರ ನಾಯಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕೆಪಿಸಿಸಿ ಮುಖಂಡರಾದ ಬಿ.ಕೆ. ಹರಿಪ್ರಸಾದ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಶಾಂತವೀರ ನಾಯಕ್ ಅವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕಗೊಳಿಸಿ ಅಧಿಕೃತ ಆದೇಶ ಪತ್ರ ನೀಡಿದ್ದಾರೆ.

ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಶಾಂತವೀರ ನಾಯಕ್ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸಾರ್ವಜನಿಕ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶಾಂತವೀರ ನಾಯಕ್ ಅವರು, ಕಾರ್ಮಿಕರ ಹಕ್ಕುಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಇದೀಗ ಅವರಿಗೆ ರಾಜ್ಯಮಟ್ಟದ ಜವಾಬ್ದಾರಿ ನೀಡಿರುವುದಕ್ಕೆ ಶಿವಮೊಗ್ಗ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಶುಭಾಶಯ ಕೋರಿದ್ದಾರೆ.

Former Shivamogga Zilla Panchayat member Shanthaveera Nayak has been appointed as the new State President of the KPCC Labour Cell. Senior leader B.K. Hariprasad issued the official appointment order with immediate effect.