ಶಿವಮೊಗ್ಗ: ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಓಪನ್ 7ನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು

.
ಕಾರ್ಯಕ್ರಮ ಉದ್ಘಾಟಿಸಿದ ಈಶ್ವರಪ್ಪ ಅವರು, ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಕ್ರೀಡಾ ಕ್ಷೇತ್ರದಲ್ಲಿ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಹಾಗೂ ಪದಕಗಳನ್ನು ಗೆದ್ದ ಪ್ರತಿಭಾವಂತ ಕ್ರೀಡಾಪಟುಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ಕರಾಟೆಯಂತಹ ಕ್ರೀಡೆಗಳು ಯುವಕರಲ್ಲಿ ಶಿಸ್ತು, ಆತ್ಮವಿಶ್ವಾಸ, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆ ಬೆಳೆಸಲು ಸಹಕಾರಿಯಾಗುತ್ತವೆ. ಇಂತಹ ಅಂತರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳು ಸ್ಥಳೀಯ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಒದಗಿಸುತ್ತವೆ.
ಶಿವಮೊಗ್ಗದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದು, ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.




More Stories
ಶಿವಮೊಗ್ಗ ವಿದ್ಯುತ್ ವ್ಯತ್ಯಯ: ಅ.15ರಂದು ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ವಿಶ್ವ ಕೌಶಲ್ಯ ಸ್ಪರ್ಧೆ 2026: ಶಿವಮೊಗ್ಗದಲ್ಲಿ ಅರ್ಜಿ ಆಹ್ವಾನ
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ವಶಕ್ಕೆ