AI-Vartha.in

ನಿಖರ ಸುದ್ದಿ, ನೇರ ವರದಿ

ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ 88 ದ್ವಿಚಕ್ರ ವಾಹನಗಳ ಹರಾಜು ಅ.28ಕ್ಕೆ

Two-wheelers to be auctioned at Doddapete police station in Shivamogga

ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡಿರುವ, ವಾರಸುದಾರರು ಪತ್ತೆಯಾಗದ 88 ಅನುಪಯುಕ್ತ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ಅಕ್ಟೋಬರ್ 28ರಂದು ನಡೆಯಲಿದೆ.

ಬುಧವಾರ ಬೆಳಿಗ್ಗೆ 9 ಗಂಟೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ವಾಹನಗಳನ್ನು ವಿಲೇವಾರಿ ಮಾಡಲು ಈ ಹರಾಜು ಆಯೋಜಿಸಲಾಗಿದೆ.

ಆಸಕ್ತರು ನಿಗದಿತ ಅವಧಿಯಲ್ಲಿ ಠಾಣಾ ಆವರಣಕ್ಕೆ ಆಗಮಿಸಿ ಹರಾಜಿನಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

A public auction of 88 unclaimed two-wheelers seized at Doddapete police station in Shivamogga will be held on October 28 at 9 am. The auction follows an order of the 2nd ACJ and JMFC court, and interested persons can participate at the police station premises.