ಶಿವಮೊಗ್ಗ: ಈದ್ ಮಿಲಾದ್ ಅಂಗವಾಗಿ ಶಿವಮೊಗ್ಗದಲ್ಲಿ ನಡೆದ ಮೆರವಣಿಗೆಯಲ್ಲಿ ಮಾದಕ ವಸ್ತುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿಶೇಷ ಅಭಿಯಾನವನ್ನು ಪೊಲೀಸ್ ಇಲಾಖೆ ಹಮ್ಮಿಕೊಂಡಿತು.
ನಗರ ಬಿ ವಿಭಾಗದ ಡಿವೈಎಸ್‌ಪಿ ಸಂಜೀವ್ ಕುಮಾರ್ ಹಾಗೂ ವಿನೋಬನಗರ ಪೊಲೀಸ್ ಠಾಣೆಯ ಪಿಐ ಸಂತೋಷ್ ಕುಮಾರ್ ಡಿಕೆ ಅವರ ನೇತೃತ್ವದಲ್ಲಿ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮಿನಕೊಪ್ಪದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ‘ನಶಾಮುಕ್ತ ಭಾರತ’ ಅಭಿಯಾನದಡಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರು ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ವಿಶೇಷವಾಗಿ “ಗಾಂಜಾ ಬೇಡ ಬ್ರೋ, ಗಾಂಜಾ ಬೇಡ” ಎಂಬ ಸಂದೇಶದ ಮೂಲಕ ಯುವಜನತೆ ಮಾದಕ ವ್ಯಸನದಿಂದ ದೂರವಿರಬೇಕು ಎಂಬ ಸಂದೇಶ ಸಾರಲಾಯಿತು.
ಮಾದಕ ವಸ್ತುಗಳ ಬಳಕೆ ವ್ಯಕ್ತಿಯ ಆರೋಗ್ಯ ಮಾತ್ರವಲ್ಲದೆ ಕುಟುಂಬ ಮತ್ತು ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಯುವಕರು ಮಾದಕ ವ್ಯಸನಕ್ಕೆ ಒಳಗಾಗದೆ ಶಿಕ್ಷಣ, ಕ್ರೀಡೆ ಹಾಗೂ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆ ಜಾಗೃತಿ ಮೂಡಿಸಿತು.
ಈದ್ ಮಿಲಾದ್‌ನಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಜವಾಬ್ದಾರಿ, ಶಾಂತಿ ಮತ್ತು ಮಾದಕ ವ್ಯಸನಮುಕ್ತ ಸಮಾಜದ ಕುರಿತು ಅರಿವು ಮೂಡಿಸುವ ಪೊಲೀಸ್ ಇಲಾಖೆಯ ಪ್ರಯತ್ನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
During an Eid Milad procession in Somina Koppa, Shivamogga, police conducted an anti-drug awareness campaign under the ‘Nasha Mukt Bharat’ initiative, urging youth to stay away from ganja and other intoxicants.



More Stories
ಅಂತರರಾಷ್ಟ್ರೀಯ ಹೃದ್ರೋಗ ತಜ್ಞರ ಸಮ್ಮೇಳನದಲ್ಲಿ ಡಾ. ಶರತ್ ಸಂಗನಗೌಡರ್ ಅವರಿಗೆ ಪ್ರಶಸ್ತಿ
ವೃತ್ತಿಯ ಜೊತೆಗೆ ಸಮಾಜ ಸೇವೆಯೂ ಮುಖ್ಯ: ಶಿಕ್ಷಕಿ ತುಳಸಿ ಅಡಿಗ
ಮಣ್ಣಲ್ಲಿ ಮಣ್ಣಾಗುವ ಕಣ್ಣುಗಳು ಮತ್ತೊಬ್ಬರ ಬಾಳಿಗೆ ಬೆಳಕಾಗಲಿ: ವಿ. ನಾಗರಾಜ್