AI-Vartha.in

ನಿಖರ ಸುದ್ದಿ, ನೇರ ವರದಿ

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ವಶಕ್ಕೆ

ಕಾಂಗ್ರೆಸ್ ಕಚೇರಿಗೆ ತೆರಳುವ ಮಾರ್ಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಇಲಾಖೆಯ ವಾಹನಗಳನ್ನು ಅಡ್ಡವಾಗಿ ನಿಲ್ಲಿಸಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾದರು. ಆದರೆ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪೊಲೀಸ್ ವಾಹನಗಳು ಮತ್ತು ಬ್ಯಾರಿಕೇಡ್‌ಗಳನ್ನು ದಾಟಿ ಮುಂದೆ ಸಾಗಲು ಪ್ರಯತ್ನಿಸಿದರು.

ಆಗ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆಯಲು ಮುಂದಾದರು. ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸ್ ವಾಹನಗಳಲ್ಲಿ ಕೂರಿಸುವ ಸಂದರ್ಭದಲ್ಲಿ ಗದ್ದಲ ಮತ್ತು ಮಾತಿನ ಚಕಮಕಿ ನಡೆಯಿತು. ಕೆಲವರು ಅಸ್ವಸ್ಥರಾದಂತೆ ಕಂಡುಬಂದರು. ಇನ್ನು ಕೆಲವರನ್ನು ವಾಹನಕ್ಕೆ ಕೂರಿಸಲು ಮಹಿಳಾ ಪೊಲೀಸರು ಹರಸಾಹಸ ಪಡಬೇಕಾಯಿತು.

ಸ್ಥಳದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರ್ಯಪ್ಪ ಅವರ ನಡುವೆ ಏರುಧ್ವನಿಯಲ್ಲಿ ಮಾತುಕತೆ ನಡೆಯಿತು. ಮಾಜಿ ಉಪಮೇಯರ್ ಸುರೇಖಾ ಮುರುಳೀಧರ್ ಸಹ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

BJP Mahila Morcha workers protested at Gopi Circle in Shivamogga against alleged sexual harassment of students and tried to lay siege to the district Congress office. Police stopped them with barricades and detained the workers amid commotion.