AI-Vartha.in

ನಿಖರ ಸುದ್ದಿ, ನೇರ ವರದಿ

ಷಟಲ್ ಬ್ಯಾಡ್ಮಿಂಟನ್: ಈಜಿಪ್ಟ್ ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗದ ಅವಳಿ ಸಹೋದರರು

shivamogga-pavan-puneeth-shuttle-badminton.jpg

ಶಿವಮೊಗ್ಗ: ನಗರದ ಅವಳಿ ಸಹೋದರರಾದ ಪವನ್ ಮತ್ತು ಪುನೀತ್ ಅವರು ಈಜಿಪ್ಟ್‌ನ ಕೈರೋ ನಗರದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಕ್ಟರ್ ಬಿಡಬ್ಲ್ಯುಎಫ್ ವರ್ಲ್ಡ್ ಜೂನಿಯರ್ ಟೀಮ್ ಚಾಂಪಿಯನ್‌ಶಿಪ್ 2026 ರ ಷಟಲ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಅಕ್ಟೋಬರ್ 5 ರಿಂದ 17 ರವರೆಗೆ, 13 ದಿನಗಳ ಕಾಲ ಈ ಚಾಂಪಿಯನ್‌ಶಿಪ್ ನಡೆಯಲಿದೆ.

ಪವನ್ ಮತ್ತು ಪುನೀತ್ ಅವರು ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಡಬಲ್ಸ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಮಟ್ಟದಿಂದ ವಿಭಾಗ, ರಾಜ್ಯ ಮತ್ತು ರಾಷ್ಟ್ರಮಟ್ಟದವರೆಗೆ ಹಂತ ಹಂತವಾಗಿ ಸಾಧನೆ ಮಾಡಿ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಡುವ ಅವಕಾಶ ಪಡೆದಿದ್ದಾರೆ.

ಇವರು ಶಿವಮೊಗ್ಗದ ಗುರುಪುರದಲ್ಲಿರುವ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರಿಗೂ 17 ವರ್ಷ ವಯಸ್ಸು.

ಪುರಲೆಯ ವೆಂಕಟೇಶ ನಗರದ ನಿವಾಸಿಗಳಾದ ಸುರೇಶ್ ಮತ್ತು ಶಕುಂತಲಾ ದಂಪತಿಯ ಪುತ್ರರಾದ ಇವರು, ಪ್ರಸ್ತುತ ಬೆಂಗಳೂರಿನ ಯಾದವ್ ಪ್ರೊ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತುದಾರ ಮಧುಸೂದನ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಅಂತರರಾಷ್ಟ್ರೀಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ನಾದಮಯಾನಂದನಾಥ ಸ್ವಾಮೀಜಿ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಸುರೇಶ್ ಎಸ್.ಎಚ್., ಅಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Twin brothers Pavan and Puneeth from Shivamogga are representing India in the BWF World Junior Team Championships 2026 (under-19 shuttle badminton) in Cairo, Egypt, from October 5 to 17. Ranked number one in the national doubles rankings, the 17-year-old first-year PU students train at Yadav Pro Badminton Academy, Bengaluru.