AI-Vartha.in

ನಿಖರ ಸುದ್ದಿ, ನೇರ ವರದಿ

Soraba Temple Theft Case: ದೇವಸ್ಥಾನಗಳ ಹುಂಡಿ ಕದಿಯುತ್ತಿದ್ದ ಕಳ್ಳ ಸೊರಬ ಪೊಲೀಸರ ಬಲೆಗೆ

ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ: ಸೊರಬ ಪೊಲೀಸರ ಮಿಂಚಿನ ಕಾರ್ಯಾಚರಣೆ!

ಶಿವಮೊಗ್ಗ, Ai-ವಾರ್ತ, ಸೆಪ್ಟೆಂಬರ್ 24: ಸೊರಬ ತಾಲೂಕಿನ ಕುಂಬತ್ತಿ ಗ್ರಾಮದ ಪ್ರಸಿದ್ಧ ದುರ್ಗಾಂಬಾ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿಕೊಂಡು ತಲೆಮರೆಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಸೊರಬ ತಾಲೂಕು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ಪುಣೆದಹಳ್ಳಿ ನಿವಾಸಿ ರಾಕೇಶ್ (28) ಎಂದು ಗುರುತಿಸಲಾಗಿದೆ. ಆಗಸ್ಟ್ 26 ರಂದು ದುರ್ಗಾಂಬಾ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನವಾಗಿದ್ದ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವಿಶೇಷ ತನಿಖಾ ತಂಡ ರಚನೆ: ಪ್ರಕರಣದ ತನಿಖೆಗಾಗಿ ಸೊರಬ ಸಿಪಿಐ ಮಹಾಂತೇಶ್ ಕಂಬಿ ಅವರ ಮೇಲ್ವಿಚಾರಣೆಯಲ್ಲಿ ಪಿಎಸ್ಐ ನವೀನ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಘವೇಂದ್ರ ಮತ್ತು ವಿನಯ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿದ ತನಿಖಾ ತಂಡವು ಆರೋಪಿ ರಾಕೇಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಸರಣಿ ಕಳ್ಳತನದ ರಹಸ್ಯ ಬಯಲು: ಪೋಲಿಸರ ವಿಚಾರಣೆ ವೇಳೆ ಆರೋಪಿ ರಾಕೇಶ್ ತನ್ನ ಸಹಚರ ನವೀನ್ ಅಲಿಯಾಸ್ ದುರ್ಗಾ ಎಂಬುವವನ ಜೊತೆಗೂಡಿ ಹಲವಾರು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ. ಸೊರಬದ ಕುಂಬತ್ತಿ ದುರ್ಗಾಂಬಾ ದೇವಸ್ಥಾನ, ಜಂಬಾನಿ ಮಾರಿಕಾಂಬಾ ದೇವಸ್ಥಾನ ಹಾಗೂ ಶಿರಾಳಕೊಪ್ಪದ ಚನ್ನಬಸವ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿಗಳನ್ನು ಕದ್ದು ಹಣ ದೋಚುತ್ತಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

Soraba police have arrested Rakesh (28), a resident of Punedahalli in Shikaripura taluk, in connection with the theft of donation boxes (Hundi) from Kumbatti Durgamba temple. During interrogation, the accused confessed to stealing donation boxes from multiple temples, including Jambani Marikamba and Shiralakoppa Channabasava temples, along with his accomplice Naveen alias Durga.