ಶಿವಮೊಗ್ಗ, ಸೆಪ್ಟೆಂಬರ್ 03: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದಲ್ಲಿ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟಾರೆ 1,01,73,650 ರೂಪಾಯಿ (ಒಂದು ಕೋಟಿ ಒಂದು ಲಕ್ಷದ ಎಪ್ಪತ್ತಮೂರು ಸಾವಿರದ ಆರುನೂರ ಐವತ್ತು ರೂಪಾಯಿಗಳು) ನಗದು ಸಂಗ್ರಹವಾಗಿದೆ.
ನಗದು ಹಣದ ಜೊತೆಗೆ ಭಕ್ತಾದಿಗಳು ದೇವರಿಗೆ ಮತ್ತು ದರ್ಗಾಕ್ಕೆ ಅರ್ಪಿಸಿದ್ದ ಅಪಾರ ಪ್ರಮಾಣದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಕೂಡ ಕಾಣಿಕೆಯಾಗಿ ಸ್ವೀಕೃತಗೊಂಡಿವೆ. ಸಂಗ್ರಹವಾದ ಸಂಪೂರ್ಣ ನಗದು ಮೊತ್ತವನ್ನು ನಿಯಮಾನುಸಾರ ತಕ್ಷಣವೇ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಜಿಲ್ಲಾಧಿಕಾರಿಗಳಿಂದ ಖುದ್ದು ಪರಿಶೀಲನೆ ಅತ್ಯಂತ ಪಾರದರ್ಶಕವಾಗಿ ನಡೆದ ಈ ಹುಂಡಿ ಎಣಿಕೆ ಕಾರ್ಯ ಪ್ರಕ್ರಿಯೆಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಎನ್. ಹೇಮಂತ್ ಕುಮಾರ್ ಹಾಗೂ ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳ ಭಾಗವಹಿಸುವಿಕೆ ಈ ಕಾಣಿಕೆ ಎಣಿಕೆ ಸಂದರ್ಭದಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್, ಮುಜರಾಯಿ ತಹಸೀಲ್ದಾರ್ ಆರ್. ಪ್ರದೀಪ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆರೆಹಳ್ಳಿ ರಾಮಪ್ಪ ಹಾಗೂ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಇವರೊಂದಿಗೆ ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ಸೂಕ್ತ ಭದ್ರತೆ ಒದಗಿಸಿದ್ದ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.
The hundi collection counting at Sri Chowdeshwari-Sayyid Sadat Dargah in Thirthahalli, Shivamogga district, yielded Rs 1,01,73,650 in cash along with gold and silver ornaments offered by devotees. The counting was directly inspected by Shivamogga Deputy Commissioner Prabhuling Kavalikatti, ZP CEO N. Hemanth Kumar, and Assistant Commissioner Dr. Maithri.



More Stories
ಪತ್ರಿಕಾ ವಿತರಕರ ದಿನಾಚರಣೆ ಸೆ. 4ರಂದು
ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಪುನರಾರಂಭಕ್ಕೆ ಆಗ್ರಹಿಸಿ ಸೆಪ್ಟೆಂಬರ್ 15 ರಿಂದ ಬೆಂಗಳೂರಿಗೆ ಬೃಹತ್ ಪಾದಯಾತ್ರೆ
ಶಿವಮೊಗ್ಗ: ಸಿ.ಎ. ನಿವೇಶನಗಳ ನಿಯಮ ಸಡಿಲಿಕೆಗೆ ಆಗ್ರಹಿಸಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯಗೆ ಮನವಿ