ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣಕ್ಕೆ ಆದ್ಯತೆ; ಪೊಲೀಸ್ ಆಡಳಿತಕ್ಕೆ ಮತ್ತಷ್ಟು ಚುರುಕು ನಿರೀಕ್ಷೆ
ತೀರ್ಥಹಳ್ಳಿ: ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಭಾನುಪ್ರಕಾಶ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಅಧಿಕಾರ ಹಸ್ತಾಂತರ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ನೂತನ ಡಿವೈಎಸ್ಪಿ ಡಾ. ಭಾನುಪ್ರಕಾಶ್ ಅವರಿಗೆ ಜವಾಬ್ದಾರಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುಷ್ಮಾ ಅವರು ನೂತನ ಅಧಿಕಾರಿಯನ್ನು ಬರಮಾಡಿಕೊಂಡರು.
ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ಭಾನುಪ್ರಕಾಶ್ ಅವರು ಇನ್ನು ಮುಂದೆ ಉಪವಿಭಾಗ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಆಡಳಿತದ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.
ಈ ಹಿಂದೆ ತೀರ್ಥಹಳ್ಳಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅರವಿಂದ್ ಕಲಗುಜ್ಜಿ ಅವರು ನಿವೃತ್ತರಾದ ಬಳಿಕ, ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ತೀರ್ಥಹಳ್ಳಿ ಉಪವಿಭಾಗದ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಇದೀಗ ಡಾ. ಭಾನುಪ್ರಕಾಶ್ ಅಧಿಕಾರ ಸ್ವೀಕರಿಸುವ ಮೂಲಕ ಉಪವಿಭಾಗಕ್ಕೆ ಪೂರ್ಣ ಪ್ರಮಾಣದ ಡಿವೈಎಸ್ಪಿ ನೇಮಕಗೊಂಡಂತಾಗಿದೆ.
ಯುವ ಐಪಿಎಸ್ ಅಧಿಕಾರಿಯೊಬ್ಬರು ತೀರ್ಥಹಳ್ಳಿ ಉಪವಿಭಾಗದ ಜವಾಬ್ದಾರಿ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ಸೇವೆಯಲ್ಲಿ ಮತ್ತಷ್ಟು ಚುರುಕು ಮೂಡಲಿದೆ ಎಂಬ ನಿರೀಕ್ಷೆ ಸ್ಥಳೀಯವಾಗಿ ವ್ಯಕ್ತವಾಗಿದೆ.
IPS officer Dr. Bhanuprakash has taken charge as the new DySP of Thirthahalli Sub-Division in Shivamogga district. He will oversee law and order, crime control and police administration in the subdivision.



More Stories
ಶಿವಮೊಗ್ಗದ ಗ್ಯಾರೇಜ್ ಮೇಲೆ ದಾಳಿ: ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ, ಮಾಲೀಕರಿಗೆ ಐವತ್ತು ಸಾವಿರ ದಂಡದ ಎಚ್ಚರಿಕೆ
ಹಣಗೆರೆಕಟ್ಟೆ ಭಾವೈಕ್ಯತಾ ಕೇಂದ್ರ: ಕಾಣಿಕೆ ಹುಂಡಿಯಲ್ಲಿ ₹54.50 ಲಕ್ಷಕ್ಕೂ ಅಧಿಕ ಹಣ ಸಂಗ್ರಹ; ಧಾರ್ಮಿಕ ಸೌಹಾರ್ದತೆಗೆ ಹೆಸರುವಾಸಿಯಾದ ಮುಜರಾಯಿ ಇಲಾಖೆಯ ‘ಎ’ ಶ್ರೇಣಿಯ ಕ್ಷೇತ್ರ
ಶಿವಮೊಗ್ಗ ರೋಟರಿ ಕ್ಲಬ್ ಉತ್ತರ ಘಟಕದ ಸಮಾಜಮುಖಿ ಸೇವೆಗೆ ಸಂದ ಗೌರವ: ಭರಪೂರ 33 ಜಿಲ್ಲಾ ಪ್ರಶಸ್ತಿ ಪ್ರಧಾನ